ನವದೆಹಲಿ: ಅಟ್ಟಾರಿ ಗಡಿ ತಲುಪಿ ತನ್ನ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಲು ಯತ್ನಿಸಿದ ಮಧ್ಯಪ್ರದೇಶದ ೨೪ ವರ್ಷದ ಯುವತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದು ನಂತರ ಪಂಜಾಬ್ ಪೊಲೀಸರಿಗೆ ಒಪ್ಪಿಸಿದರು.
ಜೂನ್ ೧೪ರಂದು ಮಧ್ಯಪ್ರದೇಶದ ರೇವಾ ಜಿಲ್ಲೆಯ ಖಾಸಗಿ ಶಾಲೆಯೊಂದರ ಶಾಲಾ ಶಿಕ್ಷಕಿಯಾಗಿರುವ ೨೪ ವರ್ಷದ ಫಿಜಾ ಖಾನ್ ನಾಪತ್ತೆಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಕೆ ಪಾಕಿಸ್ತಾನದ ದಿಲ್ಶಾದ್ ಎಂಬ ವ್ಯಕ್ತಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಂವಹನ ನಡೆಸಿದ್ದಳು. ಅವರಿಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು. ಹೀಗಾಗಿ ಆತನನ್ನು ಮದುವೆಯಾಗಲು ನಿರ್ಧರಿಸಿದ್ದು ರೇವಾದಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು. ಅಲ್ಲದೆ ೩೦ ದಿನಗಳವರೆಗೆ ಪಾಕಿಸ್ತಾನ ವೀಸಾವನ್ನು ಪಡೆದುಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆಕೆಯನ್ನು ಮಧ್ಯಪ್ರದೇಶ ಪೊಲೀಸರಿಗೆ ಒಪ್ಪಿಸಲಾಗಿದೆ.