ನ್ಯೂಸ್ ನಾಟೌಟ್ : ಕಲ್ಲುಗುಂಡಿಯ ಕ್ಲೀನಿಕ್ ವೊಂದರ ಮೇಲೆ ಆರೋಗ್ಯಾಧಿಕಾರಿಗಳು ಇದೀಗ ದಾಳಿ ನಡೆಸಿ ಕ್ಲೀನಿಕ್ ಮುಚ್ಚಿಸಿದ್ದಾರೆ.
ಪರವಾನಗಿ ಇಲ್ಲದೆ ಕ್ಲೀನಿಕ್ ನಡೆಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿ ಆದೇಶದಂತೆ ಕ್ಲೀನಿಕ್ ಅನ್ನು ಮುಚ್ಚಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಕಳೆದ ೨೦ಕ್ಕೂ ಹೆಚ್ಚು ವರ್ಷದಿಂದ ಮಹಿಳೆಯೊಬ್ಬರು ಕ್ಲೀನಿಕ್ ನಡೆಸುತ್ತಿದ್ದರು. ಇವರ ವಿರುದ್ಧ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.