ನ್ಯೂಸ್ ನಾಟೌಟ್: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಜೂನ್ 30ರಂದು ಬಹುಮತ ಸಾಬೀತುಪಡಿಸುವಂತೆ ಮಹಾ ವಿಕಾಸ್ ಆಘಾಡಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದರು.
ವಿಶ್ವಾಸಮತ ಸಾಬೀತು ಮಾಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರು ನೀಡಿರುವ ಆದೇಶಕ್ಕೆ ತಡೆ ನೀಡಿ ಎಂದು ಶಿವಸೇನಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ‘ಗುರುವಾರವೇ ವಿಶ್ವಾಸಮತ ಸಾಬೀತುಪಡಿಸಿ’ ಎಂದು ಆದೇಶಿಸಿತು. ಇದರ ಬೆನ್ನಲ್ಲೇ, ಉದ್ಧವ್ ಅವರು ರಾಜೀನಾಮೆ ಘೋಷಿಸಿದರು.