ನ್ಯೂಸ್ ನಾಟೌಟ್: ಕೊಡಗು ಜಿಲ್ಲೆ ಪೆರಾಜೆ ಗ್ರಾಮದಿಂದ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ. ಕಾಣೆಯಾದ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ ಎನ್ನಲಾಗಿದೆ. ಆಕೆ ಮೇ28 ರಿಂದ ಮನೆಯಿಂದ ಕಾಣೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ-ತಾಯಿಯ ಕುಡಿತದ ದುಶ್ಚಟದಿಂದ ನೊಂದು ಮಗಳು ಮನೆ ಬಿಟ್ಟಿರಬಹುದು ಎಂದು ಊರವರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ದೊರಕಿಲ್ಲ. ಪೊಲೀಸರು ನಾಪತ್ತೆಯಾಗಿರುವ ಬಾಲಕಿಗಾಗಿ ಹುಡುಕಾಟ ಆರಂಭಿಸಿದ್ದಾರೆ.