ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಗ್ಗೆ ಪೊಲೀಸರು ಬಂದೂಕು ಸದ್ದು ಮಾಡಿದೆ. ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಗಳ ಚಳಿ ಬಿಡಿಸಿದ ಖಾಕಿ ಪಡೆ ಫೈಯರಿಂಗ್ ನಡೆಸಿ ಇಬ್ಬರು ಹಂತಕರ ಹೆಡೆಮುರಿ ಕಟ್ಟಿದೆ. ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ನಡೆದಿದೆ.
ಕಳೆದ ವಾರ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ನನ್ನು ಬಂಧಿಸಿದ್ದರು. ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕೊಂಡೊಯ್ಯುವ ವೇಳೆ ಈ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮೂರು ಸುತ್ತು ಫೈರಿಂಗ್ ನಡೆಸಿದ್ದು ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ. ಘಟನೆಯಲ್ಲಿ ಪಿಎಸ್ ಐ ರಾಜೇಂದ್ರ, ಎಎಸ್ ಐ ಡೇವಿಡ್, ಸುಧೀರ್ ಎಂಬವರು ಗಾಯಗೊಂಡಿದ್ದಾರೆ.