ನ್ಯೂಸ್ ನಾಟೌಟ್: ದ್ವಿತೀಯ ಪಿಯುಸಿ ಫಲಿತಾಂಶ ಹೊರಬರುತ್ತಿದ್ದಂತೆ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆ ಕುಶಾಲನಗರದ ಬಸವನಹಳ್ಳಿಯಿಂದ ವರದಿಯಾಗಿದೆ.
ಪರೀಕ್ಷೆಯಲ್ಲಿ ಕಡಿಮೆ ಅಂಕದ ಹಿನ್ನಲೆ ಮನ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಸಂಧ್ಯಾ (17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಕುಶಾಲನಗರದ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆಯ ತಂದೆ ನಿವೃತ್ತ ಸೈನಿಕರಾಗಿದ್ದಾರೆ, ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.