ನ್ಯೂಸ್ ನಾಟೌಟ್: ರೌಡಿ ಶೀಟರ್ ರಾಜು ಯಾನೆ ರಾಘವೇಂದ್ರ ಆಲಿಯಾಸ್ ರವಿರಾಜ್ ಬಂಗೇರ ಎಂಬಾತನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಿನ್ನೆ ರಾತ್ರಿ (ಜೂನ್ 6) ರಂದು ಇಬ್ಬರು ಅಪರಿಚಿತರಿಂದ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ರೌಡಿ ಶೀಟರ್ ರಾಘವೇಂದ್ರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಘವೇಂದ್ರ (28) ಸಾವನ್ನಪ್ಪಿದ್ದಾನೆ.
ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದ ರಾಘವೇಂದ್ರ ಸಹಾಯಕ್ಕಾಗಿ ಅಂಗಲಾಚಿದರೂ ಯಾರೊಬ್ಬರೂ ಭಯದಿಂದ ಸಹಾಯಕ್ಕೆ ಮುಂದೆ ಬರಲಿಲ್ಲ. ನಂತರ ಸುಮಾರು ಹೊತ್ತಿನ ನಂತರ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ವೇಳೆಗಾಗಲೇ ತೀವ್ರ ರಕ್ತಸ್ರಾವದಿಂದ ಬಳಲಿದ್ದ ರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ರಾಘವೇಂದ್ರನ ಸಾವಿಗೆ ಹಳೆಯ ದ್ವೇಷವೇ ಕಾರಣವಾಗಿದೆ ಎಂದು ಹೇಳಲಾಗಿದೆ.