ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ಎಲ್ಲ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಕೂಡ ರಜೆಯನ್ನು ಮುಂದುವರಿಸುವುದಕ್ಕೆ ನಿರ್ಧರಿಸಿದ್ದಾರೆ.