ನ್ಯೂಸ್ ನಾಟೌಟ್ : ಇದೇ ಬರುವ ಶನಿವಾರ (23.07.2022)ದಂದು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಅರೆಭಾಷೆ ಪಾರಂಪರಿಕ ವಸ್ತುಕೋಶ ಮತ್ತು ಅರೆಭಾಷೆ ನಾಟಕ, ಯಕ್ಷಗಾನ, ಕಥೆ, ಪ್ರವಾಸ ಕಥನ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಸಭಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಅಂಬಳಿಕೆ ಹಿರಿಯಣ್ಣ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಕೃತಿ ಪರಿಚಯವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಮಾಧವ ಪೆರಾಜೆ ಮಾಡಲಿದ್ದಾರೆ. ಅತಿಥಿಗಳಾಗಿ ನಾಗೇಶ್ ಕುಂದಲ್ಪಾಡಿ, ಚಂದ್ರಕಲಾ ಬಳ್ಳಡ್ಕ , ಪದ್ಮಯ್ಯ ಕುಂಬಳಚೇರಿ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಲಾಗಿದೆ.