ನ್ಯೂಸ್ ನಾಟೌಟ್: ಬಿಜೆಪಿ ನಾಯಕ, ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಗೆ ಸಂಬಂಧ ಪಟ್ಟಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದೀಗ ಬೆಳ್ಳಾರೆಯಲ್ಲಿ ಶಂಕಿತ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಬಂಧಿತರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೆ ರಾಜ್ಯ ಪೊಲೀಸರು ಇದೀಗ ಕೇರಳ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಆರೋಪಿಗಳನ್ನು ಹೆಡೆಮುರಿ ಕಟ್ಟುವುದಕ್ಕೆ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.