ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಖಾಸಗಿ ಟಿವಿ ಮಾಧ್ಯಮವೊಂದು ವರದಿ ಮಾಡಿದೆ. ಇನ್ನಷ್ಟು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಹಿಂದೂ ಕಾರ್ಯಕರ್ತನ ಹತ್ಯೆಯ ಹಿನ್ನೆಲೆಯಲ್ಲಿ ಬೆಳ್ಳಾರೆ, ಸುಳ್ಯ, ಪುತ್ತೂರು ಹಾಗೂ ಕಡಬದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಸದ್ಯ ಪ್ರಮುಖ ಆರೋಪಿ ಅರೆಸ್ಟ್ ಆಗಿದೆ ಅನ್ನುವ ಮಾಹಿತಿ ಲಭ್ಯವಾಗಿದ್ದು ಆತ ಬೆಳ್ಳಾರೆಯ ಮೂಲದವನು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ದೊರೆಯಬೇಕಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ೧೫ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಇವರು ಕೊಟ್ಟ ಮಾಹಿತಿಯ ಆಧಾರದ ಮೇರೆಗೆ ಬುಧವಾರ ತಡರಾತ್ರಿ ಮೂವರನ್ನು ಬಂಧಿಸಿದ್ದರು, ಆದರೆ ಮುಖ್ಯ ಆರೋಪಿ ಯಾರು ಅನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಉನ್ನತ ಮೂಲಗಳು ನ್ಯೂಸ್ ನಾಟೌಟ್ ಗೆ ಖಚಿತಪಡಿಸಿವೆ.