ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಅಪ್ಪಳಿಸಿದೆ. ಇಂದಿನಿಂದ ಇನ್ನೂ ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಇರಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳ್ತಂಗಡಿ ತಾಲೂಕಿನ ಮಕ್ಕಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.