ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ-ಮಳೆ ಮುಂದುವರಿದಿದೆ.
ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲೂ ಹೆಚ್ಚಾದ ಮಳೆಯ ತೀವೃತೆ ಹೆಚ್ಚಾಗಿದೆ. ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದ್ದು ನಾಪೋಕ್ಲು ಭಾಗಮಂಡಲ ರಸ್ತೆ ಜಾಲವೃತವಾಗಿದೆ. ಈ ಸಲ ಒಟ್ಟು ಮೂರನೇ ಭಾರಿಗೆ ನಾಪೋಕ್ಲು – ಭಾಗಮಂಡಲ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಳೆ ಹೆಚ್ಚಾದಲ್ಲಿ ಭಾಗಮಂಡಲ – ಮಡಿಕೇರಿ ರಸ್ತೆ ಸಂಪರ್ಕ ಖಡಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.