ನ್ಯೂಸ್ ನಾಟೌಟ್: ಬಿಜೆಪಿ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿರುವ ಪಕ್ಷದ ಕಾರ್ಯಕರ್ತರು ತಮ್ಮ ಹುದ್ಧೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಇದೀಗ ಬಿಜೆಪಿಯಲ್ಲಿ ರಾಜೀನಾಮೆಯ ಪರ್ವ ಶುರುವಾಗಿದೆ.
ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ಹುಬ್ಬಳ್ಳಿ ,ಚಿತ್ರದುರ್ಗ, ತುಮಕೂರು, ಕೊಪ್ಪಳ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಯುವ ಮೋರ್ಚಾ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು ಹೊರನಡೆದಿದ್ದಾರೆ. ಬಿಜೆಪಿಯ ಸಹವಾಸ ಸಾಕು ಅಂತ ಕಾರ್ಯಕರ್ತರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನಿಗೆ ರಕ್ಷಣೆ ನೀಡುವುದಕ್ಕೆ ಸಾಧ್ಯವಾಗದಿದ್ದ ಮೇಲೆ ಈ ಸರಕಾರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.