ನ್ಯೂಸ್ ನಾಟೌಟ್: ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ನೀಡಿರುವ ರಜೆಯನ್ನು ವಿಸ್ತರಿಸಲಾಗಿದೆ. ಕಾಲೇಜು ಮಕ್ಕಳಿಗೆ ತರಗತಿಗಳು ಎಂದಿನಂತೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.
ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸೋಮವಾರ ಜು.11 ರಂದು ಶೈಕ್ಷಣಿಕ ಸಂಸ್ಥೆಗಳು ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನದಿ, ಹಳ್ಳ ಕೊಳ್ಳಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು ಭಾರೀ ಆತಂಕಕ್ಕೆ ಕಾರಣವಾಗಿದೆ.