ನ್ಯೂಸ್ ನಾಟೌಟ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಸೋಮವಾರದಿಂದ ಒಟ್ಟು ನಾಲ್ಕು ದಿನ ದಕ್ಷಿಣ ಕನ್ನಡ ಜಿಲ್ಲೆಗೆ ಜಿಲ್ಲಾಡಲೀಥ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯಿಂದ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪದಂತಹ ಯಾವುದೇ ಸಮಸ್ಯೆ ಎದುರಾದರೆ ತುರ್ತು ಸೇವೆಗೆ ಜಿಲ್ಲಾ ಆಡಳಿತ ಸಿದ್ಧವಾಗಿದೆ ಎಂದು ತಿಳಿಸಿದೆ.
ಅಪಾಯದ ಸಮಯದಲ್ಲಿ ಟೋಲ್ ಫ್ರೀ ಸಂಖ್ಯೆ 1077 ಅಥವಾ ದೂರವಾಣಿ 0824-2442590 ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ನೀರು ನಿಂತಿರುವ ತಗ್ಗುಪ್ರದೇಶ, ಕೆರೆ, ನದಿ ತೀರ, ಸಮುದ್ರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಅವುಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಎಂದು ನಿರ್ದೇಶನ ನೀಡಲಾಗಿದೆ.