ನ್ಯೂಸ್ ನಾಟೌಟ್: ಧೋ ಎಂದು ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸ್ವತಃ ಹವಾಮಾನ ಇಲಾಖೆ ಈ ವಿಚಾರವನ್ನು ಸ್ಪಷ್ಟಪಡಿಸಿದೆ. ಮುಂದಿನ ಎರಡು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿ ಎರಡೂ ಕಡೆ 204 ಮಿ.ಮೀ. ಸುರಿಯುವ ಸಾಧ್ಯತೆ ಎಂದು ತಿಳಿದು ಬಂದಿದೆ. ಈ ಮೊದಲು ಜುಲೈ 7 ರ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು.