ನ್ಯೂಸ್ ನಾಟೌಟ್: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆಯಾದ ಬೆನ್ನಲ್ಲೇ ಇದೀಗ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ,ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಡುಪಿ ನಗರ ಸೇರಿದಂತೆ ಕಾರ್ಕಳ, ಹೆಬ್ರಿ, ಕಾಪು ಕುಂದಾಪುರ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಹಾಗೂ ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.