ನ್ಯೂಸ್ ನಾಟೌಟ್: ಕೊಡಗಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಮಂಗಳವಾರ ರಜೆ ನೀಡುವ ಅಧಿಕಾರವನ್ನು ವಿಪರೀತ ಮಳೆ ಇದ್ದ ಆಯಾ ವ್ಯಾಪ್ತಿಯ ಶಾಲಾ ಮುಖ್ಯ ಶಿಕ್ಷಕರಿಗೆ ನೀಡಲಾಗಿದೆ. ಸ್ವತಃ ಈ ವಿಚಾರವನ್ನು ಜಿಲ್ಲಾಧಿಕಾರಿಯವರ ಆಪ್ತ ಸಹಾಯಕರು ಮಾಹಿತಿ ನೀಡಿದ್ದಾರೆ.
ಹೆಚ್ಚು ಮಳೆ ಇರುವ ವ್ಯಾಪ್ತಿಯ ವಿದ್ಯಾರ್ಥಿ ಪೋಷಕರು ಆಯಾ ಶಾಲೆಯ ಮುಖ್ಯ ಶಿಕ್ಷಕರು ಅಥವಾ ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ರಜೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಉಳಿದಂತೆ ಮಳೆ ಕಡಿಮೆ ಇರುವ ಪ್ರದೇಶಗಳಲ್ಲಿ ಎಂದಿನಂತೆ ಶಾಲೆ, ಕಾಲೇಜುಗಳು ನಡೆಯಲಿದೆ ಎಂದು ತಿಳಿಸಲಾಗಿದೆ.