ನ್ಯೂಸ್ ನಾಟೌಟ್: ಬಿಜೆಪಿಯ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಯಾಗಿದ್ದು ಈ ಸೂಕ್ಷ್ಮ ಸಂದರ್ಭದಲ್ಲಿ ಅನ್ಯಮತೀಯ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಲು ಹೋಗಿ ಎಡವಟ್ಟು ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ.
ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ನಿಂತಿಕಲ್ಲು ಬಳಿ ತಲುಪಿತ್ತು. ಈ ಸಂದರ್ಭದಲ್ಲಿ ಅನ್ಯಮತೀಯ ವ್ಯಕ್ತಿ ಮೊಬೈಲ್ ನಲ್ಲಿ ಮೆರವಣಿಗೆ ವಿಡಿಯೋ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪ್ರಶ್ನೆ ಮಾಡಲು ಮುಂದಾದಾಗ ಆತ ತನ್ನ ಬೈಕ್ ಅನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ವೇಳೆ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಆತನ ಬೈಕ್ ಪುಡಿಯಾಗಿದೆ ಎಂದು ತಿಳಿದು ಬಂದಿದೆ.