ನ್ಯೂಸ್ ನಾಟೌಟ್: ಸರಕಾರಿ ನೌಕರರಿಗೆ ಇದೀಗ ಉತ್ತರ ಪ್ರದೇಶ ಸರಕಾರ ಬಿಸಿ ಮುಟ್ಟಿಸಿದೆ.
ಉತ್ತರ ಪ್ರದೇಶದಲ್ಲಿ ಮತ್ತೊಂದು ರೂಲ್ಸ್ ಜಾರಿಗೆ ಬಂದಿದ್ದು ನೆರೆ ರಾಜ್ಯಗಳ ಗಮನ ಸೆಳೆದಿದೆ. ಹೌದು.. ಸರಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ ಅಂತ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜಿಲ್ಲಾಧಿಕಾರಿ ಆರ್ಯಕಾ ಚೌಧರಿ ಆದೇಶ ಹೊರಡಿಸಿದ್ದಾರೆ. ಈ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕರು, ಇತರೆ ಇಲಾಖೆಗಳ ನೌಕರರು ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ. ಕೇವಲ ಫಾರ್ಮಲ್ಸ್ ಧರಿಸಲಷ್ಟೇ ಅವಕಾಶ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಅಂತ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಕೆಲ ಸರಕಾರಿ ಕಚೇರಿಯ ನೌಕರರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.