ನ್ಯೂಸ್ ನಾಟೌಟ್: ವಿಚಾರಣೆಗೆಂದು ಕರೆದೊಯ್ಯುತ್ತಿದ್ದ ವೇಳೆ ಏಕಾಏಕಿ ಪೊಲೀಸರ ಮೇಲೆ ಆರೋಪಿಯೊಬ್ಬ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಮಂಗಳೂರಿನ ಅಸೈಗೋಳಿ ಎಂಬಲ್ಲಿ ಘಟನೆ ನಡೆದಿದೆ. ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮುಕ್ತಾರ್ ಗುಂಡಿನ ದಾಳಿಗೊ ಳಗಾದ ಆರೋಪಿ ಎಂದು ತಿಳಿದು ಬಂದಿದೆ.
ಏನಿದು ಘಟನೆ?
ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಹಿಟ್ ಲಿಸ್ಟ್ ನಲ್ಲಿದ್ದ ಮುಕ್ತಾರ್ ಎಂಬ ಕ್ರಿಮಿನಲ್ ಗಾಗಿ ಪೊಲೀಸರು ಕಳೆದ ಕೆಲವು ವರ್ಷಗಳಿಂದ ಹುಡುಕಾಟ ನಡೆಸುತ್ತಿದ್ದರು. 2016ರಿಂದ ಈವರೆಗೆ ಆತನ ಬಂಧನವಾಗಿರಲಿಲ್ಲ. ಆತ ಇರುವುದರ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡಿದ್ದ ಕೊಣಾಜೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಆತನನ್ನು ಬಂಧಿಸಿದ್ದಾರೆ. ಈ ವೇಳೆ ಆತ ಕ್ರಿಮಿನಲ್ ಕೃತ್ಯ ಎಸಗಲು ಬಳಸಿರುವ ವಾಹನ ತೋರಿಸಲು ಕರೆದೊ ಯ್ಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಆತ ಪೊಲೀಸರಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ್ದ. ಆಗ ಮುಕ್ತಾರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಆರೋ ಪಿಯನ್ನು ದೇರಳಕಟ್ಟೆಯ ಕೆ.ಎಸ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.