ನ್ಯೂಸ್ ನಾಟೌಟ್: ಪ್ರವೀಣ್ ಹತ್ಯೆ ಪೂರ್ವ ನಿಯೋಜಿತ ಕೃತ್ಯ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ವಾರದ ಹಿಂದೆ ನಡೆದಿದ್ದ ಮಸೂದ್ ಹತ್ಯೆಗೆ ಪ್ರತೀಕಾರ ಎಂದು ಹೇಳಲಾಗುತ್ತಿದೆ. ಆದರೆ ಈ ಪ್ರಕರಣಕ್ಕೂ ಪ್ರವೀಣ್ಗೂ ಯಾವುದೇ ಸಂಬಂಧವಿರಲಿಲ್ಲ. ಪ್ರವೀಣ್ ಹಿಂದೆ ಯಾವ ಪ್ರಕರಣದಲ್ಲಿ ಇದ್ದವರೂ ಅಲ್ಲ. ಅವರು ಸಾಮಾನ್ಯ ಕಾರ್ಯಕರ್ತರು, ಅಂಗಡಿ ಮುಚ್ಚುವ ಸಂದರ್ಭದಲ್ಲಿ ತಲೆಗೆ ಮತ್ತು ಕುತ್ತಿಗೆಗೆ ತಲವಾರಿನಿಂದ ಹಲ್ಲೆ ನಡೆಸಿರುವುದನ್ನು ಯಾರೂ ಕ್ಷಮಿಸುವುದಕ್ಕೆ ಸಾಧ್ಯವಿಲ್ಲ. ಕೂಡಲೇ ಇದನ್ನು ಎನ್ ಐಎ ತನಿಖೆಗೆ ವಹಿಸಬೇಕು. ಆರೋಪಿಗಳನ್ನು ಬಂಧಿಸುವ ಕೆಲಸ ಆಗಬೇಕು ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.