ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ರೂ. 10 ಲಕ್ಷ ಘೋಷಿಸಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್ ನಲ್ಲಿ ಪ್ರಕಟಿಸಿಕೊಂಡಿದ್ದಾರೆ.
ದುಷ್ಕೃತ್ಯಕ್ಕೆ ಬಲಿಯಾದ ನಮ್ಮ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಸ್ಥೈರ್ಯ ತುಂಬುವ ಜತೆ ಕುಕೃತ್ಯ ನಡೆಸಿದ ದುರುಳರಿಗೆ ತಕ್ಕ ಪಾಠ ಕಲಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಪ್ರವೀಣ್ ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ರೂ.10 ಲಕ್ಷ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.