ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ನಾಯಕ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಅತ್ಯಂತ ಖಂಡನೀಯವಾಗಿದೆ ಎಂದು ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ.
ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ಹಂತಕರನ್ನು ತಕ್ಷಣ ಬಂಧಿಸಬೇಕು. ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ.