ನ್ಯೂಸ್: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಭೂಕಂಪನದ ಅನುಭವ ಆಗುತ್ತಿರುವಂತೆಯೇ ದೂರದ ಇರಾನ್ ಹಾಗೂ ಯುಎಇನಲ್ಲಿಯೂ ಪ್ರಬಲ ಭೂಕಂಪ ಸಂಭವಿಸಿದ್ದು ಇರಾನ್ನಲ್ಲಿ ಆರು ಮಂದಿ ಮೃತಪಟ್ಟಿದ್ದು 19 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಕಾಲಮಾನ ಶನಿವಾರ ಬೆಳ್ಳಂ ಬೆಳಗ್ಗೆ ದುರಂತ ಸಂಭವಿಸಿದೆ. ಇರಾನ್ ಮಾಧ್ಯಮಗಳ ಪ್ರಕಾರ ಭೂಕಂಪದ ತೀವ್ರತೆ 6.1 ರಷ್ಟು ದಾಖಲಾಗಿತ್ತು ಎಂದು ತಿಳಿದು ಬಂದಿದೆ. ಭೂಕಂಪ ಪೀಡಿತ ಪ್ರದೇಶದಲ್ಲಿ ಅಪಾರ ಹಾನಿಯಾಗಿದೆ ಎನ್ನಲಾಗುತ್ತಿದೆ. ದಕ್ಷಿಣ ಇರಾನ್ ನ ಭೂಮಿಯ ಹತ್ತು ಕಿ.ಮೀ ಆಳದಲ್ಲಿ ಕಂಪನ ಸಂಭವಿಸಿದೆ. ಇರಾನ್ ಕಾಲಮಾನ ರಾತ್ರಿ 1.32ಕ್ಕೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇದರ ಪರಿಣಾಮ ಯುಎಇನಲ್ಲೂ ಸಾಕಷ್ಟು ಹಾನಿಯಾಗಿದೆ ಎಂದು ವರದಿಯಾಗಿದೆ. 1990 ರಲ್ಲಿ ಇರಾನ್ ನಲ್ಲಿ 7.4 ತೀವ್ರತೆಯಲ್ಲಿ ಕಂಪನವಾಗಿತ್ತು. 40,000 ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.