ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಕರಾವಳಿ ಉದ್ವಿಗ್ನಗೊಂಡಿದೆ. ಪುತ್ತೂರಿನಲ್ಲಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳ್ಳಾರೆ, ಸುಳ್ಯ, ಕಡಬದಲ್ಲಿ ಬಿಗುವಿನ ವಾತಾವರಣ ಕಂಡುಬಂದಿದೆ.
ಇದೀಗ ಸುಳ್ಯದಲ್ಲಿ ಸುಳ್ಯದಲ್ಲಿ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿಯೂ ನಡೆದಿದೆ. ಪ್ರವೀಣ್ ಹತ್ಯೆಯ ಕಿಡಿ ಇದೀಗ ಕರಾವಳಿಯಾದ್ಯಂತ ಆವರಿಸುತ್ತಿದೆ. ಸುಳ್ಯ ತಾಲೂಕಿನ ಬಹುತೇಕ ಕಡೆ ಬಂದ್ ಆಗಿದೆ. ಇದೀಗ ಸಂಪಾಜೆ ಹಾಗೂ ಕಲ್ಲುಗುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.