ನ್ಯೂಸ್ ನಾಟೌಟ್: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.
ವಿದ್ಯಾರ್ಥಿನಿಯು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಪೋಷಕರು ಐಎಎಸ್ ಮಾಡುವಂತೆ ಒತ್ತಡ ಹಾಕಿದ್ದರು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲು ಮಾಡಲಾಗಿದ್ದು, ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.