ನ್ಯೂಸ್ ನಾಟೌಟ್: ಮದುವೆಯಾಗಿ ಸಂಸಾರ ನಡೆಸುತ್ತಿದ್ದ ಮಹಿಳೆಯೊಬ್ಬಳು ಪ್ರಿಯಕರನ ಜೊತೆಗೆ ಲಿವಿಂಗ್ ಟು ಗೆದರ್ ರಿಲೇಷನ್ ಶಿಪ್ನಲ್ಲಿದ್ದಾಗ ಸಿಡಿದೆದ್ದ ಪತಿ ತಾಲಿಬಾನ್ ಸ್ಟೈಲ್ ನಲ್ಲಿ ಮೋಸ ಮಾಡಿದ ಪತ್ನಿಗೆ ಶಿಕ್ಷೆ ನೀಡಿದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಜಾಲತಾಣದಲ್ಲಿ ವೈರಲ್ ಆಗಿದೆ.
ಆದಿವಾಸಿಗಳ ಪ್ರಾಬಲ್ಯವಿರುವ ಉದಯನಗರದ ಬೋರ್ಪದವ್ ಗ್ರಾಮದಲ್ಲಿ ನಡೆದಿದೆ. ಜೂನ್ 24ರಂದು ಮಹಿಳೆ ಮನೆ ಬಿಟ್ಟು ಎಲ್ಲೋ ಹೋದವಳು ವಾಪಸ್ ಬಂದಿರಲಿಲ್ಲ. ಮಹಿಳೆಯ ಪತಿ ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಮಹಿಳೆ ಕಾಣೆಯಾಗಿರುವ ಬಗ್ಗೆ ಪತಿ ಉದಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ವೇಳೆ ಯುವತಿ ತನ್ನ ಪ್ರಿಯಕರನಾಗಿರುವ ಹರಿ ಸಿಂಗ್ ಎಂಬ ಯುವಕನ ಮನೆಯಲ್ಲಿ ಅದೇ ಗ್ರಾಮದಲ್ಲಿಯೇ ವಾಸವಾಗಿದ್ದಾಳೆ ಎಂದು ತಿಳಿದು ಬಂದಿದೆ. ಗ್ರಾಮದ ಜನರು ಹರಿಸಿಂಗ್ ಅವರ ಮನೆಯಲ್ಲಿ ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ. ಪತಿ ಮತ್ತು ಗ್ರಾಮಸ್ಥರು ಮಹಿಳೆ ಹಾಗೂ ಪ್ರಿಯಕರನನ್ನು ಮನೆಯಿಂದ ಆಚೆ ತಂದು ಇಬ್ಬರನ್ನೂ ಮೊದಲು ತೀವ್ರವಾಗಿ ಥಳಿಸಲಾಯಿತು. ನಂತರ ಪತಿಯನ್ನು ಮಹಿಳೆಯ ಭುಜದ ಮೇಲೆ ಕೂರಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿದ್ದಾರೆ. ಇನ್ನು ಪ್ರಿಯಕರನ ಕೊರಳಿಗೆ ಪಾದರಕ್ಷೆ ಮತ್ತು ಚಪ್ಪಲಿಯನ್ನು ಧರಿಸಿ ಮೆರವಣಿಗೆ ನಡೆಸಿದರು.