ನ್ಯೂಸ್ ನಾಟೌಟ್ : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಸೋಮವಾರದಿಂದ ಎಲ್ಲಾ ಅಂಗಡಿ, ವ್ಯವಹಾರ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ರಾತ್ರಿ ವೇಳೆ ಅಂಗಡಿಗಳು, ವಾಹನಗಳ ಸಂಚಾರಕ್ಕೆ ಹೇರಿದ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಆ. 14 ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಮುಂದುವರೆಯಲಿದೆ. ಅದುವರೆಗೆ ಐದು ಜನರಿಗಿಂತ ಹೆಚ್ಚು ಸಂಖ್ಯೆಯಲ್ಲಿ ಜನರು ಗುಂಪು ಗೂಡುವಂತಿಲ್ಲ ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.