ಮಂಗಳೂರು : ಕೋಮು ಸೂಕ್ಷ್ಮ ಉಳ್ಳಾಲದಲ್ಲಿ ತಂಡವೊಂದು ತನ್ನ ಮೇಲೆ ಕೊಲೆಗೆ ಯತ್ನಿಸಿದೆ ಎಂದು ಸುಳ್ಳು ಕಥೆ ಕಟ್ಟಿದ ಯುವಕ ನೋರ್ವನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.
ಜಾಲ ಹಿತ್ತಿಲು ನಿವಾಸಿ ಕಿಶೋರ್ ಸಾಲ್ಯಾ ನ್ ಎಂಬಾತ ಇಂದು ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ತನ್ನ ಮೇಲೆ ಆಗಂತುಕರ ತಂಡವೊಂದು ಮಾರಾಕಾಸ್ತ್ರ ಹಿಡಿದು ಅಟ್ಟಾಡಿಸಿದ್ದಾರೆ ಎಂದು ಮನೆಗೆ ಬಂದು ಹೇಳಿದ್ದಾರೆ. ಕ್ಷಣಾರ್ಧದಲ್ಲಿ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಎನ್.ಶಶಿಕುಮಾರ್ ಈ ಬಗ್ಗೆ ಆತನನ್ನು ನಾನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದು, ಆತನೇ ಮನೆಗೆ ಬಂದು ಸುಳ್ಳು ಸುದ್ದಿ ಸೃಷ್ಟಿಸಿದ್ದಾನೆ. ಆತನ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸ್ಪಷ್ಟಪಡಿಸಿದ್ದಾರೆ.