ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ವಿವಿಧ ಕಡೆ ಭಾರಿ ಮಳೆಯಾಗುತ್ತಿದೆ. ಆ.೬ರ ತನಕ ಬೆಳಗ್ಗೆ ೮.೩೦ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಕೊಡಗಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಜಿಲ್ಲಾಡಳಿತ ಅಗತ್ಯ ತುರ್ತು ಕ್ರಮವನ್ನು ತೆಗೆದುಕೊಂಡಿದೆ. ಮಾತ್ರವಲ್ಲ ನಾಳೆ (ಆ.೬ರಂದು) ಕೊಡಗಿನ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ನಾಪೋಕ್ಲು ಭಾಗಮಂಡಲ ರಸ್ತೆಯ ಮೇಲೆ ನೀರು ನಿಂತಿದೆ. ಈಗಾಗಲೇ ನಾಪೋಕ್ಲು ಭಾಗಮಂಡಲ ಸಂಪರ್ಕ ಬಂದ್ ಆಗಿದೆ. ಮತ್ತಷ್ಟು ಮಳೆ ಹೆಚ್ಚಾದಲ್ಲಿ ಮಡಿಕೇರಿ ಭಾಗಮಂಡಲ ರಸ್ತೆ ಕೂಡ ಬಂದ್ ಆಗುವ ಸಾಧ್ಯತೆ ಇದೆ.