ನ್ಯೂಸ್ ನಾಟೌಟ್: ಮಡಿಕೇರಿ- ಸಂಪಾಜೆ ರಸ್ತೆಯಲ್ಲಿ ಒಂದು ದಿನದ ಮಟ್ಟಿಗೆ ಸಂಚಾರ ನಿಷೇಧಿಸುವಂತೆ ರಾಷ್ಟ್ರೀಯ ಹೆದ್ದಾರಿ ಮಡಿಕೇರಿ ಉಪ ವಿಭಾಗದ ಸಹಾಯ ಇಂಜಿನೀಯರ್ ಕೊಡಗು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮದೆನಾಡಿನಲ್ಲಿ ಯಾವುದೇ ಸಮಯದಲ್ಲಿ ಗುಡ್ಡ ಕುಸಿಯುವ ಆತಂಕ ಇರುವುದರಿಂದ ಇಂತಹ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಜಿಲ್ಲಾಧಿಕಾರಿ ಯಾವುದೇ ಆದೇಶ ಹೊರಡಿಸಿಲ್ಲ.