ನ್ಯೂಸ್ ನಾಟೌಟ್ : ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಭೂಕುಸಿತ ಆತಂಕದ ಹಿನ್ನೆಲೆಯಲ್ಲಿ ಇಂದು (ಆ.೧೦) ಮತ್ತು ನಾಳೆ (ಆ.೧೧) ರಾತ್ರಿ 8.30 ರಿಂದ ಬೆಳಗ್ಗೆ 6.30 ಗಂಟೆಯವರೆಗೆ ಮಡಿಕೇರಿ – ಸಂಪಾಜೆ ರಾಷ್ಟ್ರೀಯ ರಾಹೆದ್ದಾರಿ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಮದೆನಾಡು ಬಳಿ ಭೂಕುಸಿತದ ಭೀತಿ.ಯಾವುದೇ ಕ್ಷಣದಲ್ಲಿ ಮಣ್ಣು ಜರಿದು ಹೆದ್ದಾರಿಗೆ ಬೀಳುವ ಸಾಧ್ಯತೆ. ಈ ಹಿನ್ನೆಲೆಯಲ್ಲಿ ಸಂಪಾಜೆ – ಮಡಿಕೇರಿ ನಡುವೆ ಇಂದು ರಾತ್ರಿ 8.30 ರಿಂದ ನಾಳೆ ಬೆಳಗ್ಗೆ 6.30 ಗಂಟೆಯವರೆಗೆ ಹಾಗೂ ನಾಳೆ ರಾತ್ರಿ 8.30 ಗಂಟೆಯಿಂದ ನಾಡಿದ್ದು ಬೆಳಗ್ಗೆ 6.30 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ. ಮೊದಲಿಗೆ ಸಂಚಾರ ಮಾಡುವಂತೆಯೇ ಇಂಜಿನೀಯರ್ ಗಳು ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಜಿಲ್ಲಾಧಿಕಾರಿಗಳು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.