ನ್ಯೂಸ್ ನಾಟೌಟ್ : ಮದೆನಾಡಿನ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿತದ ಭೀತಿಯ ಪರಿಣಾಮ ಮಡಿಕೇರಿ- ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೂ ಎಲ್ಲಾ ವಾಹನ ಸಂಚಾರಕ್ಕೆ ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹೆದ್ದಾರಿ ಸಹಾಯಕ ಇಂಜಿನಿಯರ್ ಅವರಿಂದ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಲಾದ ಹಿನ್ನಲೆಯಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೂರ ಪ್ರಯಾಣದ ವಾಹನ ಸವಾರರಿಗೆ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚಿದೆ.