ನ್ಯೂಸ್ ನಾಟೌಟ್ : ಹಿಂದೂ ನಾಯಕ ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್(28) ಹಾಗೂ ಸುಳ್ಯ ನಾವೂರು ಮಹಾಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಆಬಿದ್(22) ಎಂದು ಗುರುತಿಸಲಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳ ಮಾಹಿತಿ ಲಭ್ಯವಾಗಿದೆ. ಉಳಿದವರು ಸದ್ಯದಲ್ಲೇ ಬಂಧನವಾಗಲಿದ್ದಾರೆ ಎಂದು ಎಸ್.ಪಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ.