ನ್ಯೂಸ್ ನಾಟೌಟ್ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಇನ್ನಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ. ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಲಿದೆ.
ಈಗಾಗಲೇ ಪ್ರವೀಣ್ ಹತ್ಯೆಗೆ ಸಂಬಂಧಪಟ್ಟಂತೆ ಶಫೀಕ್ ಬೆಳ್ಳಾರೆ, ಝಾಕೀರ್ ಸವಣೂರು ಎಂಬ ಯುವಕರನ್ನು ಬಂಧಿಸಲಾಗಿದೆ. ಇವರು ತನಿಖೆ ವೇಳೆ ನೀಡಿದ ಮಾಹಿತಿ ಆದರಿಸಿ ಒಟ್ಟು ನಲವತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಇಬ್ಬರು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಖಚಿತಪಟ್ಟಿದೆ. ಹೀಗಾಗಿ ಪೊಲೀಸರು ಅವರನ್ನು ಬಂಧಿಸಿ ಇಂದೇ ನ್ಯಾಯಾಲಯಕ್ಕೆ ಹಾಜರು ಪಡಿಸುವ ನಿರೀಕ್ಷೆ ಇದೆ.