ನ್ಯೂಸ್ ನಾಟೌಟ್: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂಪಾಜೆ ಗ್ರಾಮದ ಕುವೆಕಾಡು ಕಿಶೋರ್ ಅವರ ಪತ್ನಿ ಪೂರ್ಣಿಮಾ (26 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪೂರ್ಣಿಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಇದೀಗ ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಮಂಗಳೂರಿನಿಂದ ಪಾರ್ಥೀವ ಶರೀರವನ್ನು ಸ್ವಗೃಹಕ್ಕೆ ತರಲಾಗುತ್ತಿದ್ದು ಕೊಯನಾಡಿನಲ್ಲಿ ವಿಧಿವಿಧಾನದ ಮೂಲಕ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪತಿ, ಇಬ್ಬರು ಗಂಡು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.