ನ್ಯೂಸ್ ನಾಟೌಟ್ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡು ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶಫೀಕ್ ಬೆಳ್ಳಾರೆಯನ್ನು ಶನಿವಾರ ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. 5 ದಿನ ಕಳೆ ದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜಾಕೀರ್ನನ್ನು ನ್ಯಾಯಾಂಗ ಬಂಧನಕ್ಕೆ ಮತ್ತು ಶಫೀಕ್ ಬೆಳ್ಳಾರೆಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.