ನ್ಯೂಸ್ ನಾಟೌಟ್: ದೋಣಿಗಾಲ್ ಹೆಗ್ಗದ್ದೆವರೆಗಿನ ಶಿರಾಡಿ ಘಾಟಿ ರಸ್ತೆಯಲ್ಲಿ ಸಂ ಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲ ರೀತಿಯ ಖಾಸಗಿ ಮತ್ತು ಸಾರ್ವಜನಿಕ ಬಸ್ ಗಳಿಗೆ ಏಕಮುಖವಾಗಿ ಸಂಚಾರ ಮಾಡುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.
ದೋಣಿಗಲ್ ಸಮೀಪ ಭೂಕುಸಿತದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲ ರೀ ತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು . ಇದೀಗ ಮಡಿಕೇರಿ-ಮಂಗಳೂರು ನಡುವಿನ ಕೊಯನಾಡು ಸಮೀಪ ರಸ್ತೆ ಬಿರುಕು ಬಿಟ್ಟಿದ್ದು ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.