ನ್ಯೂಸ್ ನಾಟೌಟ್: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನೌಫಲ್ ಹಾಗೂ ಅಬೀದ್ಗೆ ಆಗಸ್ಟ್ ೧೨ರ ತನಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ವಿಚಾರಣೆ ನಡೆಸಿದ ಕಿರಿಯ ಸಿವಿಲ್ ನ್ಯಾಯಾಧೀಶೆ ಕು.ಅರ್ಪಿತಾ ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಆ.೭ರಂದು ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರಿಬ್ಬರನ್ನು ಸುಳ್ಯದ ಪಿಎಫ್ಐ ಕಚೇರಿಗೆ ಕರೆ ತರಲಾಗಿತ್ತು. ಅಲ್ಲಿ ಸ್ಥಳ ಮಹಜರು ನಡೆಸಲಾಗಿತ್ತು. ಬಳಿಕ ಸಂಜೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸದ್ಯ ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ಇನ್ನುಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.