ನ್ಯೂಸ್ ನಾಟೌಟ್: ಗ್ರಾಮ ಪಂಚಾಯತ್ ಸದಸ್ಯನಿಗೆ ಸಾರ್ವಜನಿಕವಾಗಿಯೇ ಚಾಕು ತೋರಿಸಿ ಹಲ್ಲೆ ನಡೆಸಿದ ಪ್ರಕರಣ ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಚಾಕು ತೋರಿಸಿ ಹಲ್ಲೆ ನಡೆಸಲಾಗಿತ್ತು. ಈ ಕುರಿತಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ಮಂಗಳವಾರ ಈ ಘಟನೆ ನಡೆದಿತ್ತು. ರಸ್ತೆಯಲ್ಲಿ ಕಾಂಕ್ರಿಟ್ ಮಿಕ್ಸರ್ ವಾಹನ ನಿಲ್ಲಿಸಿದ್ದಕ್ಕಾಗಿ ಕೇಪು ಗಣೇಶ ಹಾಗೂ ನಿಶಾಂತ್ ಶೆಟ್ಟಿ ನೀರುಮಾರ್ಗ ಎನ್ನುವವರು ಚಾಕು ತೋರಿಸಿ ಹಲ್ಲೆ ನಡೆಸಿದ್ದಾರೆ ಎಂದು ಪುನೀತ್ ಆರೋಪಿಸಿದ್ದಾರೆ. ಮಾತ್ರವಲ್ಲ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸೆಕ್ಷನ್ 324, 506, 504, 323 ಅನ್ವಯ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.