ನ್ಯೂಸ್ ನಾಟೌಟ್: ವಿವಾಹಿತ ಮಹಿಳೆಯೊಬ್ಬರು ಗುರುವಾರ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿಯಾಗಿರುವ ದೀಪಕ್ ಎಂಬವರ ಪತ್ನಿ ಚೈತ್ರಾ ಅಡಿಗ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಇವರು ಉಜಿರೆ ಖಾಸಗಿ ಶಾಲೆಯ ಶಿಕ್ಷಕಿಯಾಗಿ ಕೆಲ ಕಾಲ ಕೆಲಸ ಮಾಡಿದ್ದರು. ಇದೀಗ ಮನೆಯಲ್ಲಿಯೇ ಇದ್ದರು ಎನ್ನಲಾಗಿದೆ. ಮೂರು ವರ್ಷದ ಹಿಂದೆ ಇವರ ವಿವಾಹವಾಗಿದ್ದುಇವರಿಗೆ ಒಂದು ಮಗುವೂ ಇದೆ. ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಈಕೆ ಸಕ್ರಿಯರಾಗಿದ್ದರು. ಎಂ.ಎ.ಪೂರೈಸಿದ್ದ ಇವರು ಬಿ.ಎಡ್ ವಿದ್ಯಾಭ್ಯಾಸ ಮಾಡುವ ಇಂಗಿತವನ್ನು ಹೊಂದಿದ್ದು ಗಂಡನ ಮನೆಯವರು ಮುಂದಿನ ವರ್ಷ ತರಗತಿಗೆ ಸೇರುವಂತೆ ತಿಳಿಸಿದ್ದರು ಎಂದು ಹೇಳಲಾಗಿದೆ.