ನ್ಯೂಸ್ ನಾಟೌಟ್ : ಹಣಕಾಸಿನ ಸಮಸ್ಯೆಯಿಂದಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಯಕ್ಷಗಾನ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿಯ ನಿವಾಸಿ ಶಂಭು ಕುಮಾರ್ ಎಂದು ತಿಳಿದು ಬಂದಿದೆ. ಕಳೆದ ಹಲವಾರು ವರ್ಷಗಳಿಂದ ಯಕ್ಷಗಾನ ಕಲಾವಿದರಾಗಿ ವಿವಿಧ ಮೇಳಗಳಲ್ಲಿ ಶಂಭು ಕುಮಾರ್ ಸೇವೆ ಸಲ್ಲಿಸಿದ್ದಾರೆ. ಪುತ್ತೂರು ಮೇಳ, ಬಪ್ಪನಾಡು ಮೇಳದಲ್ಲಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಕಟೀಲು ಮೇಳದಲ್ಲಿ ಕಲಾವಿದರಾಗಿ ಕೆಲಸ ಮಾಡುತ್ತಿದ್ದರು. ಜತೆಗೆ ಉಮಾಮಹೇಶ್ವರ ಎಂಬ ಸ್ವಂತ ಮೇಳದೊಂದಿಗೆ ಯಕ್ಷಗಾನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಆರ್ಥಿಕ ಮುಗ್ಗಟ್ಟು ಇವರ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.