ನ್ಯೂಸ್ ನಾಟೌಟ್: ಕಳೆದ ನಾಲ್ಕು ವರ್ಷಗಳ ಹಿಂದೆ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಮಂಗಳೂರು ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರಪಥ -2) ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಂ. ರಾಧಾಕೃಷ್ಣ ಅವರು 15ವರ್ಷ ಕಠಿಣ ಸಜೆ ಹಾಗೂ ₹ 25 ಸಾವಿರ ದಂಡ ವಿಧಿಸಿದ್ದಾರೆ.
ಅಪರಾಧಿ (55ವರ್ಷ) ಮೆಲ್ಕಾರ್ ಹಾಗೂ ಇರಾ ಗ್ರಾಮದಲ್ಲಿ 2018 ರ ಜನವರಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ.ಈ ಹಿನ್ನಲೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವೃತ್ತ ನಿರೀಕ್ಷಕರಾಗಿದ್ದ ಶರಣಗೌಡ ಹಾಗೂ ಟಿ. ಡಿ. ನಾಗರಾಜ್ ಅವರು ಈ ಪ್ರಕರಣ ತನಿಖೆ ನಡೆಸಿದ್ದರು. ಸರಕಾರಿ ವಕೀಲ ವೆಂಕಟರಮಣ ಸ್ವಾಮಿ ಅವರು ಸರಕಾರದ ಪರವಾಗಿ ವಾದಿಸಿದ್ದರು.