ನ್ಯೂಸ್ ನಾಟೌಟ್ : ಮಡಿಕೇರಿ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಿನ್ನೆ (ಮಂಗಳವಾರ) ಸಂಜೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಭೂತನಕಾಡು ಟಾಟಾ ತೋಟದಲ್ಲಿ ಕಾರ್ಮಿಕರಾಗಿರುವ ಆಲಿ ಎಂಬುವವರ ಪುತ್ರಿ ಮನೆಯಲ್ಲಿ ವೇಲ್ ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಮಡಿಕೇರಿ ಕಾಲೇಜ್ ವೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.