ನ್ಯೂಸ್ ನಾಟೌಟ್ : ಮಂಗಳೂರಿನಲ್ಲಿ ಕರ್ತವ್ಯ ನಿರ್ವಸುತ್ತಿದ್ದ ಶಿಕ್ಷಣ ಇಲಾಖೆಯ ಸೂಪರಿಟೆಂಡೆಂಟ್ ಮಡಿಕೇರಿಯ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು ಬಿಜೈ ಮೂಲದ ಶಿವಾನಂದ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಮಡಿಕೇರಿಯ ಹಳೆ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರು ಮಂಗಳೂರು ದಕ್ಷಿಣ ವಿಭಾಗದ ಬಿಇಒ ಕಚೇರಿಯಲ್ಲಿ ಸೂಪರಿಟೆಂಡೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.