ನ್ಯೂಸ್ ನಾಟೌಟ್ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ.
ಮೃತರನ್ನು ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ(34) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಇವರ ಪತ್ನಿ ಸುಲೋಚನಾರವರು ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದಾರೆ.