ನ್ಯೂಸ್ ನಾಟೌಟ್ : ಪೆರಾಜೆ ಗ್ರಾಮ ಪಂಚಾಯತ್ ಸದಸ್ಯ ಗಾಂಧಿ ಪ್ರಸಾದ್ ಬಂಗಾರಕೋಡಿ ನಿಧನರಾಗಿದ್ದಾರೆ. ಅವರಿಗೆ ೪೮ ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿನಿಂದ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪೆರಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಅಲ್ಲದೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೃತರು ತಂದೆ,ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.