ಬೆಳ್ಳಾರೆ: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮನೆಗೆ ಬಾರದೆ ನಾಪತ್ತೆಯಾಗಿ ಸುಮಾರು ಹೊತ್ತಿನ ಬಳಿಕ ಪತ್ತೆಯಾದ ಘಟನೆ ವರದಿಯಾಗಿದೆ.
ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾಗಿದ್ದರು. ಸೆ.2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅವರು ಬೆಳ್ಳಾರೆಯಲ್ಲಿ ಪತ್ತೆಯಾಗಿದ್ದು ಪ್ರಕರಣ ಸುಖಾಂತ್ಯ ಕಂಡಿದೆ.